ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕತ್ವವನ್ನು ಮಾಜಿ‌ ಸಚಿವ ರಮಾನಾಥ್ ರೈ ವಹಿಸಿದರೆ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನಾತ್ಮಕವಾಗಿ ಬೆಳೆಯಲು ಸಾಧ್ಯವಿದೆ

ವಿಟ್ಲ:ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಸ್ತುತವಾಗಿ ಜಿಲ್ಲೆಯ ಮಾಜಿ ಸಚಿವರು ಪ್ರಾಮಣಿಕ ಸಜ್ಜನ ರಾಜಕಾರಣಿ ಮಾಜಿ ಸಚಿವ ಶ್ರೀ ಬಿ ರಮಾನಾಥ್ ರೈ ಅವರ ನಾಯಕತ್ವ ಅತ್ಯಂತ ಅಗತ್ಯವಿದ್ದು ಈ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನಾಯಕತ್ವವನ್ನು ರೈ ಅವರು ವಹಿಸಿದರೆ ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನಾತ್ಮಕವಾಗಿ ಶಕ್ತಿಯುತವಾಗಿ ಬೆಳೆದು ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಿದೆ ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ಪ್ರತಿನಿಧಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು 2013 ರ ವಿಧಾನ ಸಭಾ ಚುನಾವಣೆಯ ಪೂರ್ವ ಸಮಯದಲ್ಲಿ ರಮಾನಾಥ್ ರೈ ಅವರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟಸಿದರು ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಕಳೆದ 2013 ರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ 8 ಕ್ಷೇತ್ರದಲ್ಲಿ 7 ವಿಧಾನ ಸಭಾ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ ತದನಂತರದ ದಿನಗಳಲ್ಲಿ ರೈ ಅವರು ಸಚಿವರಾಗಿ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಜಾತಿ ಮತ ಬೇದ ಇಲ್ಲದೇ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುವುದರ ಮೂಲಕ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡಿದ್ದರು
ಪ್ರಸ್ತುತವಾಗಿ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವದ ಅವಶ್ಯಕತೆ ಎದುರಾಗಿದೆ ಒಂದು ವೇಳೆ ರೈ ಅವರು ನಾಯಕತ್ವ ವಹಿಸುದಾದರೇ ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಗತವೈಭವ ಕಾಣಲಿದೆ ಎಂದು ಅಭಿಪ್ರಾಯ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

✍️ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ

Share this on:
error: Content is protected !!