ಬೆಂಗಳೂರು: ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು, ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ. ಯಾರಿಗೂ ಅನ್ಯಾಯವಾಗದಂತೆ ಫಲಿತಾಂಶವನ್ನು ಪ್ರಕಟಿಸುತ್ತೇವೆ.ರಿಸಲ್ಟ್ ಸಮಾಧಾನವಾಗದಿದ್ದರೆ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.ಪರೀಕ್ಷಾ ಫಲಿತಾಂಶ ಪ್ರಕಟಣೆಗೆ 12 ತಜ್ಞರ ಸಮಿತಿ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.
ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ – ಸುರೇಶ್ ಕುಮಾರ್
