Latest Posts

ಜಯದ ಹಾದಿಗೆ ಮರಳಿದ ಕೋಲ್ಕತ್ತಾ ನೈಟ್ ರೈಡರ್ಸ್

ಯುಎಇ:ಐಪಿಎಲ್ 2020 ಆವೃತ್ತಿಯ ಕೆಕೆಆರ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲ ಗೆಲುವನ್ನು ತನ್ನದಾಗಿಸಿಕೊಂಡಿದೆ. ಶುಭ್ ಮನ್ ಗಿಲ್ ಮತ್ತು ಇಯಾನ್ ಮಾರ್ಗನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.
ಗುರಿಯನ್ನು ಬೆನ್ನೆಟ್ಟಿದ ರಾಜಸ್ತಾನ್ ರಾಯಲ್ಸ್ ಆರಂಭದಿಂದಲೇ ಕೆಕೆಆರ್ ಬೌಲಿಂಗ್ ದಾಳಿಗೆ ತತ್ತರಿಸಿ ಒಂದರ ಹಿಂದೆ ಒಬ್ಬರಂತೆ ಪೆವಿಲಿಯನ್ ಕಡೆ ನಡೆಯಲಾರಂಭಿಸಿದರು..
ಕೆಕೆಆರ್ ಪರವಾಗಿ ಶಿವಂ ಮಾವಿ, ವರುಣ್ ಚಕ್ರವರ್ತಿ, ಕಮಲೇಶ್ ತಲಾ ಎರಡು ವಿಕೆಟ್ ಪಡೆದುಕೊಂಡರು.
20 ಓವರ್ ಗಳ ಮುಕ್ತಾಯಕ್ಕೆ ರಾಜಸ್ಥಾನ್ ರಾಯಲ್ಸ್ 9 ವಿಕೆಟ್ ಕಳೆದು ಕೊಂಡು 137 ರನ್ ಗಳಿಸಲಷ್ಟೇ ಶಕ್ತವಾಯಿತು

ಸ್ಕೋರ್ :
KKR : 174-6
RR: 137-9

Share this on:
error: Content is protected !!