Latest Posts

ಡಿ ವಿಲಿಯರ್ಸ್ ಸ್ಪೋಟಕ ಬ್ಯಾಟಿಂಗ್ ;ಆಲ್ ರೌಂಡ್ ಪ್ರದರ್ಶನದೊಂದಿಗೆ ಮೂರನೇ ಸ್ಥಾನಕ್ಕೇರಿದ ಆರ್ಸಿಬಿ

ಶಾರ್ಜಾ : ಐಪಿಎಲ್ 2020 ಆವೃತ್ತಿಯ ಪಂದ್ಯಾಕೂಟದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ಭರ್ಜರಿ ಜಯ ಧಾಖಲಿಸಿಕೊಂಡಿದೆ, ಟಾಸ್ ಗೆದ್ದುಕೊಂಡು ಮೊದಲು ಬ್ಯಾಟಿಂಗ್ ನಡೆಸಿದ ಬೆಂಗಳೂರು, ಎ ಬಿ ಡಿ ವಿಲಿಯರ್ಸ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 194 ರನ್ ಗಳ ಬೃಹತ್ ಮೊತ್ತ ದಾಖಲಿಸಿತು.

ಗೆಲುವಿನ ಗುರಿಯತ್ತ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕೆಕೆಆರ್, ಆರ್ಸಿಬಿ ಸ್ಪಿನ್ ಮೋಡಿಗೆ ತತ್ತರಿಸಿ ನಿಗದಿತ 20 ಓವರ್ ಗಳ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 112 ರನ್ ಗಳಿಸಲಷ್ಟೇ ಶಕ್ತವಾಯಿತು.
ಕ್ರಿಸ್ ಮೋರ್ರಿಸ್ ಮತ್ತು ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದು ಕೊಂಡರು. ಈ ಮೂಲಕ ಬೆಂಗಳೂರು ರಾಯಲ್ ಚಾಲೆಂಜರ್ಸ್ ಕೂಟದಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಸ್ಕೋರ್ :
RCB : 194-2
KKR: 112-9

Share this on:
error: Content is protected !!