Latest Posts

ಸನ್ ರೈಸರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಜಯ

ದುಬೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆದ ಪಂದ್ಯದಲ್ಲಿ ಸಿಎಸ್ಕೆ ನಾಲ್ಕು ವಿಕೆಟ್ ಅಂತರದಲ್ಲಿ ಹೈದರಾಬಾದ್ ವಿರುದ್ಧ ಗೆಲುವು ತನ್ನದಾಗಿಸಿಕೊಂಡಿದೆ.

ಟಾಸ್ ಗೆದ್ದುಕೊಂಡು ಬ್ಯಾಟಿಂಗ್ ನಡೆಸಿದ ಧೋನಿ ಪಡೆ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿದರು, ಚೆನ್ನೈ ಪರವಾಗಿ ವಾಟ್ಸನ್, ರಾಯ್ಡು, ಸ್ಯಾಮ್ ಕರ್ರನ್ ಮತ್ತು ಜಡೇಜಾ ಉತ್ತಮವಾಗಿ ಬ್ಯಾಟಿಂಗ್ ನಡೆಸಿದರು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಹೈದರಾಬಾದ್ ಬೌಲರ್ ಗಳ ಕರಾರುವಾಕ್ ದಾಳಿಗೆ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. ಹೈದರಾಬಾದ್ ಪರವಾಗಿ ವಿಲಿಯಮ್ಸನ್ ಅರ್ಧ ಶತಕ ಭಾರಿಸಿ ಮಿಂಚಿದರು.
ಬ್ರಾವೋ ಮತ್ತು ಕರನ್ ಶರ್ಮ ತಲಾ ಎರಡು ವಿಕೆಟ್ ಪಡೆದುಕೊಂಡರು.

ಸ್ಕೋರ್ :
CSK-167/6
SRH- 147/8

Share this on:
error: Content is protected !!