ಶ್ರೀಲಂಕಾ: ಇಂಡಿಯನ್ ಪ್ರೀಮಿಯರ್ ಲೀಗ್ ಮಾದರಿಯಲ್ಲೇ ಲಂಕಾನ್ನರ ನಾಡಿನಲ್ಲಿ ಲಂಕಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿ ಆರಂಭಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 1 ರಂದು ಹರಾಜು ಪ್ರಕ್ರಿಯೆ ಕೂಡ ಏರ್ಪಡಿಸಲಾಗಿದೆ.
ಸದ್ಯ ಲಂಕಾ ಪ್ರೀಮಿಯರ್ ಲೀಗ್(ಎಲ್ಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಪಟ್ಟಿಯಲ್ಲಿ ಭಾರತದ ಮಾಜಿ ವೇಗದ ಬೌಲರ್ ಮುನಾಫ್ ಪಟೇಲ್ ಹೆಸರಿದೆ.