Latest Posts

ಅಮೇರಿಕಾ ಅಧ್ಯಕ್ಷ ಟ್ರಂಪ್ ಗೆ ಕೊರೋನ;ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸದ್ಯ ಡೊನಾಲ್ಡ್ ಟ್ರಂಪ್ ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಂಪ್ ಗೆ ಕೋವಿಡ್ ಸೋಂಕು ತಗಲಿರುವುದು ಶನಿವಾರ ದೃಢವಾಗಿತ್ತು. ಅವರನ್ನು ಹೆಲಿಕಾಪ್ಟರ್ ಮೂಲಕ ವಾಲ್ಟರ್ ರೀಡ್ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟ್ರಂಪ್ ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಅಪಾಯದಿಂದ ಸಂಪೂರ್ಣ ಹೊರಬಂದಿಲ್ಲವಾದರೂ, ಅವರ ಆರೋಗ್ಯದ ಬಗ್ಗೆ ನಾವು ಆಶಾವಾದಿಯಾಗಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಸಲಹೆಗಾರ ಹೋಪ್ ಹಿಕ್ಸ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಪರೀಕ್ಷೆಗೆ ಒಳಗಾಗಿದ್ದರು
ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಉನ್ನತ ಸಲಹೆಗಾರ ಹಿಕ್ಸ್ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರು. ಹಿಕ್ಸ್ ಟ್ರಂಪ್ ಜತೆಗೆ ಇದ್ದಿದ್ದರಿಂದ ಸೋಂಕು ಹರಡಿದೆ. ಇದರಿಂದಾಗಿ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಅಂತಿಮ ಹಂತದಲ್ಲಿ ಕೋವಿಡ್ ತಗುಲಿರುವುದು, ಟ್ರಂಪ್ ಪ್ರಚಾರಕ್ಕೆ ಹಿನ್ನಡೆಯಾಗಿದೆ ಎನ್ನಲಾಗಿದೆ.

Share this on:
error: Content is protected !!