Latest Posts

ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ – ಯು.ಟಿ.ಖಾದರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆಗೆ ಕಚ್ಚಾಟ ನಡೆಸುತ್ತಿರುವುದು ಕೇವಲ ಅಧಿಕಾರಕ್ಕಾಗಿ, ಇದು ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ, ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ಇವರಿಗೆ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಯ ಈ ಕಚ್ಚಾಟದಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಗೌರವ, ಘನತೆಗೆ ಧಕ್ಕೆಯಾಗಿದೆ. ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗ ಕೊರೊನಾ ಸಮಯ, ಜನರ ಪ್ರಾಣ ಉಳಿಸುವತ್ತ ಚಿತ್ತ ಹರಿಸಲಿ ಎಂದರು.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್‌ನಲ್ಲಿ ಶತಕ ಬಾರಿಸುವ ಮೂಲಕ‌ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾದ ಆರ್ಥಿಕ ನೀತಿ ಇಲ್ಲ. ಪೆಟ್ರೋಲ್ ತೆರಿಗೆ ಮೂಲಕ ಖಜಾನೆ ತುಂಬುತ್ತಿದ್ದಾರೆ. ಪೆಟ್ರೋಲ್, ಡಿಸೇಲ್ ಖರೀದಿಸಲು ಜನ ಕೆಲಸಕ್ಕೆ ಹೋಗುವಂತಾಗಿದೆ. ಪೆಟ್ರೋಲ್, ಡಿಸೇಲ್ ಆರ್ಥಿಕತೆಯ ಬೆನ್ನೆಲುಬಾಗಿದೆ. ಆದರೆ ಆರ್ಥಿಕತೆಯ ಭಾರ ಪರೋಕ್ಷವಾಗಿ ಜನರ ಮೇಲೆ ಬೀರುತ್ತಿದೆ. ಬೆಲೆ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ – ಯು.ಟಿ.ಖಾದರ್

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್‌ನಲ್ಲಿ ಶತಕ ಬಾರಿಸುವ ಮೂಲಕ‌ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಸ್ಪಷ್ಟವಾದ ಆರ್ಥಿಕ ನೀತಿ ಇಲ್ಲ. ಪೆಟ್ರೋಲ್ ತೆರಿಗೆ ಮೂಲಕ ಖಜಾನೆ ತುಂಬುತ್ತಿದ್ದಾರೆ. ಪೆಟ್ರೋಲ್, ಡಿಸೇಲ್ ಖರೀದಿಸಲು ಜನ ಕೆಲಸಕ್ಕೆ ಹೋಗುವಂತಾಗಿದೆ. ಪೆಟ್ರೋಲ್, ಡಿಸೇಲ್ ಆರ್ಥಿಕತೆಯ ಬೆನ್ನೆಲುಬಾಗಿದೆ. ಆದರೆ ಆರ್ಥಿಕತೆಯ ಭಾರ ಪರೋಕ್ಷವಾಗಿ ಜನರ ಮೇಲೆ ಬೀರುತ್ತಿದೆ. ಬೆಲೆ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಬಂಧ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.

https://m.facebook.com/story.php?story_fbid=326402802439916&id=100052105957543

Share this on:
error: Content is protected !!