Latest Posts

ಗ್ರಾಮಗಳ ಹೆಸರು ಬದಲಾವಣೆ;ಸ್ಪಷ್ಟನೆ ನೀಡಿದ ಮಂಜೇಶ್ವರ ಶಾಸಕ

ಮಂಜೇಶ್ವರ: ಕೇರಳ ರಾಜ್ಯದ ಕಾಸರಗೋಡಿನ ಗ್ರಾಮಗಳಲ್ಲಿ ಕನ್ನಡ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲಕ್ಕೆ ಶಾಸಕ ಎಕೆಎಂ ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಕೇಂದ್ರ ಸಚಿವರುಗಳು ಈ ವಿಚಾರದಲ್ಲಿ ಟ್ವೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿತ್ತು. ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಗಿದ್ದು ಈ ಬಗ್ಗೆ ಕೇರಳ ಮುಖ್ಯ ಮಂತ್ರಿ ಅವರ ಕಛೇರಿಯನ್ನು ಮತ್ತು ಅವರ ಪಿ ಎ ಅವರನ್ನು ಶಾಸಕ ಅಶ್ರಫ್ ಸಂಪರ್ಕಿಸಿ ಮಾಹಿತಿಯನ್ನು ಪಡೆಯಲಾಗಿದ್ದು ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಅವರಲ್ಲಿ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ,ಮಾಧ್ಯಮದಲ್ಲಿ ಬರುತ್ತಿರುವ ಸುದ್ದಿ ವಾಸ್ತವಕ್ಕೆ ವಿರುದ್ದುವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲಾ ಮಾಹಿತಿ ಪ್ರಕಾರ ಸ್ಥಳ ನಾಮ ಬದಲಾವಣೆ ಬಗ್ಗೆ ಹೊರ ಬರುವ ವಿಚಾರಗಳು ವಾಸ್ತವ ವಿರುದ್ದ ಇಂತಹ ಯಾವುದೇ ಸುತ್ತೋಲೆ ಕೇರಳ ಸರಕಾರ ಹೊರಡಿಸಲಿಲ್ಲ.ಅಂತಹ ಯಾವುದೇ ಯೋಚನೆಯು ಸರಕಾರದ ಮುಂದಿಲ್ಲ . ಆದರೆ ರೇಶನ್ ಕಾರ್ಡ್ ನಲ್ಲಿ ಸಾಫ್ಟ್ ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ . ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ.ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಶಾಸಕ ಅಶ್ರಫ್ ತಿಳಿಸಿದರು.

ಅಧಿಕೃತವಾಗಿ ಯಾವುದೇ ಸುತ್ತೋಲೆ ಇಲ್ಲದೆ ಕೇವಲ ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳ ಆಧಾರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಕುಮಾರಸ್ವಾಮಿ ಮಾಡಿರುವ ಟೀಟ್ , ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿದ ಹೇಳಿಕೆ ಜನರಲ್ಲಿ ಗೊಂದಲ ಉಂಟುಮಾಡಿದೆ . ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ನೀಡಿದ ಅನಗತ್ಯ ಹೇಳಿಕೆಯು ವಿಷಾದನೀಯ ಎಂದರು.

ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಪರವಾಗಿ ಕೆಲವು ಪೂರಕ ವಿಚಾರಗಳನ್ನು ಸರಕಾರದ ಗಮನಕ್ಕೆ ತರಲಾಗಿದೆ . ಈ ಬಗ್ಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸುವ ವಾತಾವರಣ ಕೇರಳದಲ್ಲಿದೆ . ಪರಿಹಾರವಾಗಬೇಕಾದ ಸಮಸ್ಯೆಗಳು ಇನ್ನೂ ಇರುವುದು ವಾಸ್ತವ . ಇದನ್ನು ಸಂಘಟಿತ ಪ್ರಯತ್ನದಿಂದ ಪರಿಹರಿಸಲು ಸಾಧ್ಯವಾಗುವ ವಾತಾವರಣ ನಿರ್ಮಾಣವಾಗಬೇಕು.ನಾಡಿನ ಭಾಷಾ ಸಾಮರಸ್ಯವನ್ನು , ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು ಎಂದರು.

ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ , ಸರಕಾರದ ಆದೇಶವೆನಾದರೂ ಬಂದರೆ ಅದರ ವಿರುದ್ಧದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ.ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ ಎಂದು ಶಾಸಕ ಅಶ್ರಫ್ ಪೀಪಲ್ಸ್ ವಿಷನ್ ಡಾಟ್ ಇನ್ ಮಾಧ್ಯಮಕ್ಕೆ ತಿಳಿಸಿದರು.

Share this on:
error: Content is protected !!