ವಿಟ್ಲ: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ನೂತನ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಆಯ್ಕೆಗೊಂಡಿದ್ದಾರೆ.
ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಈ ಹಿಂದೆ ಖ್ಯಾತ ಬರಹಗಾರರಾಗಿ , ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಇಂಟಕ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿರುತ್ತಾರೆ.

ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮೂಲಕ ಸಮಾಜ ವರ್ಗದಲ್ಲಿ ಜನಸೇವೆಯ ಮೂಲಕ ಗುರುತಿಸಿದ್ದ ಶಂಸುದ್ದೀನ್ ಅಜ್ಜಿನಡ್ಕ ಅವರು ಸಾಮಾಜಿಕ ಜಾಲತಾಣಗಳ ವಿಭಾಗದಲ್ಲಿ ಬಹಳಷ್ಟು ಪರಿಣತರಾಗಿ ಗುರುತಿಸಿಕೊಂಡಿದ್ದರು.
ಶಂಸುದ್ದೀನ್ ಅಜ್ಜಿನಡ್ಕ ಅವರ ಸೇವೆಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆಕೆ ಅವರು ಶಂಸುದ್ದೀನ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕಾತಿ ಮಾಡಿರುತ್ತಾರೆ.
ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರ ಸೂಚನೆ ಮೇರೆಗೆ
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಾ. ರಾಜಾರಾಮ್ ಕೆಬಿ ಉಪ್ಪಿನಂಗಡಿ ಅವರು ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರ ಹೆಸರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಶಿಪರಾಸ್ಸು ಮಾಡಿರುತ್ತಾರೆ.