Latest Posts

ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದಲ್ಲಿ ಬಂಟ್ವಾಳದಲ್ಲಿ ಯಶಸ್ವಿ ರಕ್ತದಾನ ಶಿಬಿರ: 122 ಯುನಿಟ್ ರಕ್ತ ಸಂಗ್ರಹ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ಇಂದು ಬಂಟ್ವಾಳ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಾಜಿ ಸಚಿವರು, ಬಂಟ್ವಾಳದ ಮಾಜಿ ಶಾಸಕರಾದ ರಮನಾಥ ರೈ ಯವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಗಣರಾಜ್ಯೋತ್ಸವ ದಿನವಾದ ಇಂದು ರಕ್ತದಾನದಂತಹ ಶ್ರೇಷ್ಠ ದಾನ ಶಿಬಿರವನ್ನು ನಡೆಸಿಕೊಟ್ಟ ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆ ಪ್ರಶಂಸನೀಯ ಎಂದು ಶ್ಲಾಘಿಸಿದರು.
ಶಿಬಿರದಲ್ಲಿ ಒಟ್ಟು 122 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲೆಯಾದ್ಯಂತ ಒಟ್ಟು ಹನ್ನೊಂದು ಕಡೆಗಳಲ್ಲಿ ಏಕಕಾಲದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ರೋಶನ್ ರೈ, ಶ್ರೀಪಾದ್ ಪಾಣಾಜೆ, ಮೊಹಮ್ಮದ್ ನಂದಾವರ, ಪರ್ವೇಝ್ ಜಿಕೆ ಗೂಡಿನಬಳಿ, ಇಸ್ಮಾಯಿಲ್, ನವೀದ್ ಕ್ರಷ್ಣಾಪುರ, ರಮ್ಲಾನ್ ಒಬೊರು ಮತ್ತು ಇತರ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Share this on:
error: Content is protected !!