ಅಲಹಾಬಾದ್: ಪೌರತ್ವ ಕಾನೂನಿನ ತಿದ್ದುಪಡಿಯನ್ನು ವಿರೋಧಿಸಿದ ಡಾ. ಕಫೀಲ್ ಖಾನ್ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಿದ್ದ ಉತ್ತರ ಪ್ರದೇಶ ಸರ್ಕಾರವನ್ನು ಅಲಹಾಬಾದ್ ಹೈಕೋರ್ಟ್ ಕಾನೂನು ಬಾಹಿರ ಎಂದು ತೀರ್ಪು ನೀಡಿದೆ. ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ಒತ್ತಾಯಿಸಿತು.
ಡಾ. ಕಫೀಲ್ ಖಾನ್ ಮೇಲೆ ಯುಪಿ ಪೊಲೀಸರು ವಿಧಿಸಿರುವ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಕೈಬಿಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸೌಮಿತ್ರ ದಯಾಳ್ ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯನ್ನು ಪರಿಶೀಲಿಸಿತು. ಕಫೀಲ್ ಖಾನ್ ಅವರ ತಾಯಿ ಹೇಬಿಯಸ್ ಕಾರ್ಪಸ್ ಅರ್ಜಿಯೊಂದಿಗೆ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.