ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಬೆಂಕಿ ದೊಡ್ಡ ಪ್ರಮಾಣದಲ್ಲಿ ಹರಡಿದ್ದು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ರಾಷ್ಟ್ರೀಯ ಮಾಧ್ಯಮ ಎಎನ್ಐ ವರದಿ ಮಾಡಿದೆ.
ಕಾರ್ಖಾನೆ ಸಿಕಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.ಆಗ್ರಾ ಎಸ್ಪಿ ಸೇರಿದಂತೆ ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ.ಬೆಂಕಿಯಿಂದ ಕಪ್ಪು ಹೊಗೆಯನ್ನು ಒಂದು ಕಿಲೋಮೀಟರ್ ದೂರದಲ್ಲಿ ನೋಡಬಹುದಾಗಿದೆ ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.