ನವದೆಹಲಿ: ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಈರಳ್ಳಿ ಬೆಲೆ ಏರಿಕೆಯಾದ ಬೆನ್ನಲ್ಲೇ ಭಾರತದಿಂದ ಬೇರೆ ದೇಶಗಳಿಗೆ ಈರುಳ್ಳಿ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕ್ಷಣದಿಂದಲೇ ವಿದೇಶಗಳಿಗೆ ಈರುಳ್ಳಿ ರಫ್ತು ನಿಲ್ಲಿಸುವಂತೆ ಸೂಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಭಾರೀ ಮಳೆಯಿಂದಾಗಿ ದಕ್ಷಿಣ ಭಾರತದ ಬಹುತೇಕ ರಾಜ್ಯಗಳು ಪ್ರವಾಹಕ್ಕೆ ತುತ್ತಾಗಿವೆ. ಬಹುತೇಕ ರಾಜ್ಯಗಳಲ್ಲಿ ಮಳೆಯಿಂದಾಗಿ ಈರುಳ್ಳಿ ಬೆಳೆಗೆ ದೊಡ್ಡ ಮಟ್ಟದ ಹಾನಿ ಸಂಭವಿಸಿದೆ. ಇದರಿಂದ ಸಹಜವಾಗಿಯೇ ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ವಿಶ್ವದ ಈರುಳ್ಳಿ ರಫ್ತುದಾರ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಭಾರತದಿಂದ ಈರುಳ್ಳಿ ಆಮದು ಮಾಡಿಕೊಳ್ಳುತ್ತಿದ್ದ ರಾಷ್ಟ್ರಗಳಿಗೆ ಈ ಆದೇಶ ತಲೆನೋವು ಶುರುವಾಗಿದೆ.