Latest Posts

ವಿವಾದಿತ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಭಾರೀ ವಿರೋಧಕ್ಕೆ ಒಳಗಾಗಿರುವ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಸಹಿ ಹಾಕಿದ್ದಾರೆ. ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ಮಸೂದೆ, ರೈತರ ಸಬಲೀಕರಣ, ಬೆಲೆ ಭರವಸೆ ಮಸೂದೆ ಮತ್ತು ಕೃಷಿ ಸೇವೆ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಈ ಕೃಷಿ ಮಸೂದೆಗಳನ್ನು ಮಂಡಿಸಿದ ವೇಳೆ ವಿರೊಧ ಪಕ್ಷಗಳಿಂದ ವಿರೋಧ ವ್ಯಕ್ತವಾಯಿತು,ಮಸೂದೆಯ ಪ್ರತಿಯನ್ನು ಹರಿದು ಪ್ರತಿಭಟಿಸಲಾಗಿತ್ತು. ಅಲ್ಲದೇ ಮಸೂದೆಗಳನ್ನು ವಿರೋಧಿಸಿ ಭಾರತ್ ಬಂದ್​ ಕೂಡ ನಡೆಯಿತು. ಸಂಸತ್​ನಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇನ್ನು ರಾಜ್ಯದಲ್ಲಿ ಮಸೂದೆಗಳನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್​ಗೆ ರೈತಸಂಘಟನೆಗಳು ಕರೆ ನೀಡಿವೆ.

Share this on:
error: Content is protected !!