ನವದೆಹಲಿ/ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಈ ನಡುವೆ ವಿರೋಧದ ನಡುವೆಯೂ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ಗೆ ತೆರಳಿ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.ಈ ಹಿಂದೆ ಬೇಟಿಗೆ ಅವಕಾಶವನ್ನು ನಿರಾಕರಿಸಲಾಗಿತ್ತು.ಬಾರೀ ಪ್ರತಿಭಟನೆ ಮತ್ತು ಜನಾಕ್ರೋಶ ಕ್ಕೆ ಹೆದರಿ ರಾಹುಲ್,ಪ್ರಿಯಾಂಕಾ ಗಾಂಧಿ ಸಹಿತ 5 ಮಂದಿಗೆ ಮಾತ್ರ ಬೇಟಿಗೆ ಅವಕಾಶವನ್ನು ನೀಡಲಾಗಿದೆ.
ಎರಡು ವಾರಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸೆಪ್ಟೆಂಬರ್ 29ರಂದು ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಕುಟುಂಬದವರನ್ನು ಕಡೆಗಣಿಸಿ ಮಧ್ಯ ರಾತ್ರಿ ಅಂತ್ಯಸಂಸ್ಕಾರದ ನಡೆಸಿದ ಪೋಲಿಸರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.