ನವದೆಹಲಿ: ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಗಳನ್ನು ನಡೆಸಲಿದ್ದಾರೆ.
ವಿದಾದಿತ ಕೃಷಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿರುವ ಈ ಕಾಯ್ದೆಗಳ ವಿರುದ್ಧ ರೈಲ್ ರೋಕೋ, ಪಂಜಾಬ್ನಲ್ಲಿ ಬಂದ್ಗಳು ನಡೆದಿದ್ದವು.
ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರವರೆಗೆ ರ್ಯಾಲಿ ನಿರ್ಧರಿಸಲಾಗಿತ್ತು.ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್, ರಾಹುಲ್ ಗಾಂಧಿ ಟ್ರ್ಯಾಕ್ಟರ್ ರ್ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಅಕ್ಟೋಬರ್ 4, 5, 6 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಖರ್, ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಮತ್ತು ಎಲ್ಲಾ ರಾಜ್ಯ ಸಚಿವರು ಮತ್ತು ಪಕ್ಷದ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಟ್ರ್ಯಾಕ್ಟರ್ ರ್ಯಾಲಿಗೆ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಮೂರು ದಿನಗಳಲ್ಲಿ 50 ಕಿ.ಮೀ ಗಿಂತಲೂ ಹೆಚ್ಚು ದೂರ ಕ್ರಮಿಸಲಿದೆ. ರ್ಯಾಲಿ ಪ್ರತಿದಿನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕೊವೀಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.