ಲಕ್ನೋ: ಹತ್ರಾಸ್ ಘಟನೆಯಲ್ಲಿ ನ್ಯಾಯ ಒದಗಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.ರಾಹುಲ್ ಗಾಂಧಿ ಅವರೊಂದಿಗೆ ಮನೆಗೆ ಭೇಟಿ ನೀಡಿದ ನಂತರ ಪ್ರಿಯಾಂಕಾ ಮಾಧ್ಯಮಗಳೊಂದಿಗೆ ಮಾತನಾಡಿದರು.
ಕುಟುಂಬಕ್ಕೆ ಕೊನೆಯ ಬಾರಿಗೆ ಮಗಳನ್ನು ನೋಡಲು ಸಾಧ್ಯವಾಗಲಿಲ್ಲ.ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು. “ಕುಟುಂಬಕ್ಕೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಕುಟುಂಬ ಬಯಸಿದೆ.ಸಾರ್ವಜನಿಕವಾಗಿ ಕುಟುಂಬಕ್ಕೆ ಬೆದರಿಕೆ ಹಾಕಿದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕು.ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ಕೂಡಬೇಕು ಎಂದು ಪ್ರಿಯಾಂಕಾ ಹೇಳಿದರು.