Latest Posts

ಮಲಪ್ಪುರನಲ್ಲಿ ಬಿಜೆಪಿಯ ಇಬ್ಬರು ಮುಸ್ಲಿಂ ಮಹಿಳಾ ಅಭ್ಯರ್ಥಿಗಳು

ತಿರುವನಂತಪುರ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಇದೇ ಮೊದಲ ಬಾರಿಗೆ ಬಿಜೆಪಿ ಮಲಪ್ಪುರ ದಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.

ಮುಸ್ಲಿಂ ಬಾಹುಳ್ಯದ ಜಿಲ್ಲೆಯಾದ ಮಲಪ್ಪುರದಲ್ಲಿ ಡಿಸೆಂಬರ್ 14ರಂದು ನಡೆಯುವ ಚುನಾವಣೆಯಲ್ಲಿ ಟಿ.ಪಿ. ಸಲ್ಮತ್ ಮತ್ತು ಆಯಿಷಾ ಹುಸೇನ್ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಸಲ್ಮತ್ ರವರು ವಂಡೂರು ಗ್ರಾಮ ಪಂಚಾಯತ್‌ಗೆ ನಾಮಪತ್ರ ಸಲ್ಲಿಸಿದ್ದರೆ, ಆಯಿಷಾ ಪೊನ್ನುಂಡಂ ಗ್ರಾಮ ಪಂಚಾಯತ್‌ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಆಯಿಷಾ ಅವರು ರಾಜಕೀಯ ಹಿನ್ನೆಲೆ ಹೊಂದಿದ್ದು, ಅವರ ಪತಿ ಹುಸೇನ್‌ ವರಿಕ್ಕೊಟ್ಟಿಲ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಸಮಿತಿ ಸದಸ್ಯರಾಗಿದ್ದಾರೆ. ಹುಸೇನ್ ಕೂಡ ಬಿಜೆಪಿ ಟಿಕೆಟ್‌ನಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಸಲ್ಮತ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ಮೋದಿ ಅವರ ಅಭಿಮಾನಿ ಯಾಗಿದ್ದು, “ಮೋದಿಯವರು ರಾಜಕೀಯದಲ್ಲಿ ಮಹಿಳೆ ಯರ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುತ್ತಿರುವುದು ಖುಷಿಯ ವಿಚಾರ’ ಎಂದಿದ್ದಾರೆ

Share this on:
error: Content is protected !!