ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡಿಗೆ ಭೇಟಿ ನೀಡುತ್ತಿದ್ದು ರಾಜಕೀಯವಾಗಿ ಅವರ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಬಿಜೆಪಿ ಸಂಘಟನೆಗೆ ಒತ್ತು ನೀಡುವುದಕ್ಕಿಂತಲೂ ಹೆಚ್ಚಾಗಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಪುತ್ರ ಎಂ.ಕೆ. ಅಳಗಿರಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯೇ ಇಲ್ಲದಿರುವುದರಿಂದ ಅಳಗಿರಿಯವರ ಹೊಸ ಪಕ್ಷದ ಆಶ್ರಯದಲ್ಲಿ ಬಿಜೆಪಿ ಬೇರು ಬಿಡುವಂತೆ ಮಾಡಬಹುದೆಂಬ ಲೆಕ್ಕಾಚಾರದೊಂದಿಗೆ ಈ ಕಸರತ್ತು ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.