Latest Posts

ಸಾಮಾಜಿಕ ಜಾಲ ತಾಣದಲ್ಲಿ ವಿವಾದಿತ ಪೋಸ್ಟ್ ಹಾಕಿದರೆ 5ವರ್ಷ ಜೈಲು 10,000 ದಂಡ !

ತಿರುವನಂತಪುರಂ: ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಗಲಭೆ , ಬೆದರಿಕೆ, ನಿಂದನೆ, ಅವಮಾನ ಮತ್ತು ಮಾನಿಹಾನಿಕರ ಹೇಳಿಕೆ ನೀಡುವುದು ಹಾಗೂ ಪ್ರಸಾರ ಮಾಡುವುದರ ವಿರುದ್ಧ ಕೇರಳ ಸರ್ಕಾರ ಹೊಸ ಕಾನೂನು ರೂಪಿಸಿದೆ.
ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡುವವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲು ಕೇರಳ ಸರ್ಕಾರ ಮುಂದಾಗಿದ್ದು, ಇದಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ. ಯಾವುದೇ ಸಂವಹನ ವಿಧಾನದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಅಥವಾ ಬೆದರಿಕೆ ಹಾಕುವ ರೀತಿಯ ಪೋಸ್ಟ್ ಗಳನ್ನು ಮಾಡಿದಲ್ಲಿ ಅಂಥವರಿಗೆ ಐದು ವರ್ಷಗಳ ವರೆಗೆ ಜೈಲು ಮತ್ತು 10 ಸಾವಿರ ರೂಪಾಯಿ ದಂಡ ಹಾಗೂ ಎರಡನ್ನೂ ವಿಧಿಸಲು ಅವಕಾಶವಿದೆ.

ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ದಮನಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ಕಾಯ್ದೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

Share this on:
error: Content is protected !!