ಉತ್ತರ ಪ್ರದೇಶ ಬಿಜೆಪಿಯಲ್ಲಿ ಉದ್ವಿಗ್ನತೆಯ ಮಧ್ಯೆ ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವ್ಯಂಗ್ಯವಾಡಿದ್ದಾರೆ.ಮುಖ್ಯಮಂತ್ರಿಯವರಿಗೆ ಇದು ಕೆಟ್ಟ ದಿನಗಳು ಮತ್ತು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಬಾಗಿಲು ಬಡಿಯುತ್ತಿದ್ದಾರೆ ಎಂದು ಅವರು ಟ್ವಿಟರ್ನಲ್ಲಿ ಬರೆದಿದ್ದಾರೆ.
“ದೇಶದ ಅತಿದೊಡ್ಡ ರಾಜ್ಯದ ಮುಖ್ಯಮಂತ್ರಿಯವರಿಗೆ ಇದು ಕೆಟ್ಟ ದಿನಗಳು, ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಬಾಗಿಲು ಬಡಿಯಬೇಕಾಗಿದೆ.” ಎಂದು ಅಖಿಲೇಶ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಯೋಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು.ಪ್ರಧಾನಮಂತ್ರಿಯೊಂದಿಗೆ ಒಂದು ಗಂಟೆ ಚರ್ಚೆ ನಡೆಸಿದ್ದಾರೆ.ನಂತರ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು. ನಿನ್ನೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದ್ದರು.