ಬೆಂಗಳೂರು: ವಿದೇಶಕ್ಕೆ ತೆರಳುವವರಿಗೆ ಕೋವಿಶೀಲ್ಡ್ ಎರಡನೇ ಡೋಸ್ ಪಡೆಯಲು ನಿಗದಿಪಡಿಸಿರುವ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.ಕೋವಿಶೀಲ್ಡ್ ಎರಡು ಡೋಸ್ಗಳ ಅಂತರವನ್ನ 12 ರಿಂದ 16 ವಾರಗಳಿಗೆ ಪರಿಷ್ಕರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ವಿದೇಶಕ್ಕೆ ತೆರಳುವ ಕೆಲವು ವರ್ಗದವರು ಮೊದಲ ಡೋಸ್ ಪಡೆದು 28 ದಿನಗಳು ಪೂರೈಸಿದ ನಂತರ ಎರಡನೇ ಡೋಸ್ ಪಡೆಯಬಹುದು ಎಂದು ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರ ತಿಳಿಸಿದೆ.

ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ, ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ಗಾಗಿ ಟೋಕಿಯೋಗೆ ತೆರಳುವ ಆಟಗಾರರು 28 ದಿನದಲ್ಲಿ ವ್ಯಾಕ್ಸಿನ್ ಪಡೆಯಬಹುದಾಗಿದೆ. ಇವರಿಗೆ ವಿಶೇಷ ಲಸಿಕೆ ಅಭಿಯಾನಕ್ಕಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ವಲವಾರು ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿದೆ.
ವಿದೇಶಕ್ಕೆ ತೆರಳುವ ಈ ಗುಂಪಿನವರು ಸೂಕ್ತ ದಾಖಲೆಗಳನ್ನ ನೀಡಿ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬಹುದಾಗಿದೆ.