ಲಕ್ನೋ: ಉತ್ತರ ಪ್ರದೇಶದ ಖೇರಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.
ಬಾಲಕಿಯ ಶವ ಭಾನುವಾರ ಪತ್ತೆಯಾಗಿದೆ. ಬಾಲಕಿ ಅತ್ಯಾಚಾರಕ್ಕೆ ಬಲಿಯಾಗಿದ್ದಾಳೆ ಎಂಬ ಅನುಮಾನದ ಮೇಲೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಮರಣೋತ್ತರ ವರದಿಯಲ್ಲಿ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಹೇಳಿದೆ. ದೇಹದ ಮೇಲೆ ಗಾಯಗಳ ಪತ್ತೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಉತ್ತರ ಪ್ರದೇಶದಲ್ಲಿ 8 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ!!!
