ಲಕ್ನೋ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯ ಚುನಾವಣೆಗಳಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.
ಆಜದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಯೋಜಿಸುತ್ತಿದೆ ಎಂಬ ವರದಿಗಳ ಮಧ್ಯೆ ಮಾಯಾವತಿ ಅವರ ಟ್ವೀಟ್ ಮಾಡಿದ್ದಾರೆ.
ಎಐಎಂಐಎಂ ಜೊತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ಸುದ್ದಿ ಕಳೆದ ದಿನದಿಂದ ಹರಿದಾಡುತ್ತಿದ್ದು, ಈ ಸುದ್ದಿ ಆಧಾರರಹಿತ ಮತ್ತು ದಾರಿತಪ್ಪಿಸುವಂತಿದೆ ಅದರಲ್ಲಿ ಸತ್ಯವಿಲ್ಲ , ಅದನ್ನು ಬಲವಾಗಿ ನಿರಾಕರಿಸುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ವರ್ಷದ ಪಂಜಾಬ್ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳದೊಂದಿಗೆ ರಾಜಕೀಯ ಮೈತ್ರಿ ಘೋಷಿಸುವುದಾಗಿ ಮಾಯಾವತಿ ಹೇಳಿದ್ದಾರೆ.117 ಸದಸ್ಯರ ವಿಧಾನಸಭೆಯಲ್ಲಿ ಉಭಯ ಪಕ್ಷಗಳ ನಡುವೆ ಸ್ಥಾನ ಹಂಚಿಕೆ ಮಾತುಕತೆಯಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಶಿರೋಮಣಿ ಅಕಾಲಿ ದಳ 97 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಎಸ್ಪಿಗೆ 20 ಸ್ಥಾನಗಳು ಸಿಗಲಿವೆ ಎಂದಿದ್ದಾರೆ.
ಏಕಾಂಗಿಯಾಗಿ ಸ್ಪರ್ಧಿಸುವುದು ಸಮಾಜವಾದಿ ಪಕ್ಷದ ನಡೆ. ಈ ಹಿಂದೆ ಬಿಎಸ್ಪಿ ಮತ್ತು ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಫಲವಾಗಿದೆ ಮತ್ತು ಮುಂದಿನ ವರ್ಷದ ಉತ್ತರ ಪ್ರದೇಶ ಚುನಾವಣೆಯಲ್ಲಿ ಅವರೊಂದಿಗೆ ಮೈತ್ರಿಗೆ ಸಿದ್ದವಿಲ್ಲವೆಂದು, ಸಮಾನ ಮನಸ್ಸಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಅಖಿಲೇಶ್ ಹೇಳಿದ್ದಾರೆ