Latest Posts

ಉತ್ತರಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಓವೈಸಿ

ಹೈದರಾಬಾದ್ : ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ 2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿಯೂ 100 ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಆಲ್ ಇಂಡಿಯಾ ಮಜಿಲಿಸ್ – ಇ ಇತ್ತೇದುಲ್ ಮುಸ್ಲಿಮೀನ್ ( ಎಐಎಂಐಎಂ ) ಪ್ರಕಟಿಸಿದೆ.ಮಾಯಾವತಿ ಓವೈಸಿ ಯೊಂದಿಗೆ ಮೈತ್ರಿ ಮಾಡುವುದಿಲ್ಲವೆಂಬ ಘೋಷಣೆಯ ಬಳಿಕ ಈ ಮಾಹಿತಿ ಹೊರಬಿದ್ದಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ ( ಎಸ್‌ಬಿಎಸ್‌ಪಿ ) ಮತ್ತು ಭಾಗಿದಾರಿ ಸಂಕಲ್ಪ ಮೋರ್ಚಾದೊಂದಿಗೆ ಮೈತ್ರಿಯೊಂದಿಗೆ ಸ್ಪರ್ಧಿಸುವುದಾಗಿ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ನಾವು ಅಭ್ಯರ್ಥಿಗಳನ್ನು 100 ಸ್ಥಾನಗಳಿಗೆ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ . ಪಕ್ಷವು ಈಗಾಗಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಮತ್ತು ಅಭ್ಯರ್ಥಿ ಅಥವಾ ಆಕಾಂಕ್ಷಿಗಳ ಅರ್ಜಿ ನಮೂನೆಗಳನ್ನು ಸಹ ಬಿಡುಗಡೆ ಮಾಡಿದೆ ‘ ಎಂದು ಒವೈಸಿ ಟೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಸಂದೇಶಗಳನ್ನು ಯಾವಾಗಲೂ ಇಂಗ್ಲೀಷ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಓವೈಸಿ ಇಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು ವಿಶೇಷವಾಗಿತ್ತು.

ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಐಎಂಐಎಂ , ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ.ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Share this on:
error: Content is protected !!