ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯದ ಕುರಿತು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ವನ್ನು ಸ್ವ ಪಕ್ಷದ ನಾಯಕರೇ ಟೀಕಿಸುತ್ತಿದ್ದಾರೆ.ರಾಜ್ಯದ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಮ್ ಇಕ್ಬಾಲ್ ಸಿಂಗ್ ಆರೋಗ್ಯ ಇಲಾಖೆಯು ಮೊದಲ ತರಂಗದಿಂದ ಪಾಠ ಕಲಿಯುತ್ತಿಲ್ಲ ಎಂದು ಆರೋಪಿಸಿದರು.
ಎರಡನೇ ತರಂಗದಲ್ಲಿ ರಾಜ್ಯದ ಪ್ರತಿ ಹಳ್ಳಿಯಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.ಬಲ್ಲಿಯಾ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಆರೋಗ್ಯ ಇಲಾಖೆ ಮಾಡಿದ ವ್ಯವಸ್ಥೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಆದರೆ, ಅಧಿಕಾರಿಗಳು ಮುಖ್ಯಮಂತ್ರಿಯನ್ನು ದಾರಿ ತಪ್ಪಿಸಿದ್ದಾರೆ ಮತ್ತು ಸತ್ಯವನ್ನು ಬಹಿರಂಗಪಡಿಸಿಲ್ಲ,ಸುಳ್ಳು ಲೆಕ್ಕವನ್ನು ಕೊಟ್ಟಿದ್ದಾರೆ ಎಂದು ರಾಮ್ ಇಕ್ಬಾಲ್ ಸಿಂಗ್ ಆರೋಪಿಸಿದ್ದಾರೆ.
ಕೋವಿಡ್ನಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ ತಲಾ 10 ಲಕ್ಷ ರೂ. ಮತ್ತು ರಾಜ್ಯದ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಬೇಕೆಂದು ಬಿಜೆಪಿ ಮುಖಂಡರು ಒತ್ತಾಯಿಸಿದರು. ಈ ಹಿಂದೆ ಶಾಸಕರು ಸೇರಿದಂತೆ ಹಲವಾರು ಬಿಜೆಪಿ ನಾಯಕರು ಯೋಗಿ ಸರ್ಕಾರದ ಕೋವಿಡ್ ನಿರ್ವಹಣೆಯನ್ನು ತೀವ್ರವಾಗಿ ಟೀಕಿಸಿದ್ದರು.