Latest Posts

ಕೇಂದ್ರ ಸರಕಾರದ ವಿರೋಧದ ನಡುವೆಯೂ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕೆಂದು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್‌ನಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ವಿಪತ್ತು ತಡೆ ಕಾಯ್ದೆಯ ಸೆಕ್ಷನ್ 12 ರ ಅಡಿಯಲ್ಲಿ ಅರ್ಹತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪಾವತಿಸಬೇಕಾದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು. ಆರು ವಾರಗಳಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ.

ಪರಿಹಾರ ನೀಡುವ ಕೋರ್ಟ್ ನಿರ್ಧಾರವನ್ನು ಕೇಂದ್ರ ಸರ್ಕಾರ ವಿರೋಧಿಸಿತು. ಆದರೆ ಕೇಂದ್ರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ ಸಂಪೂರ್ಣ l ವಿಫಲವಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವಂತೆ ಫಿರ್ಯಾದಿಗಳು ನ್ಯಾಯಾಲಯವನ್ನು ಕೋರಿದ್ದಾರೆ.

Share this on:
error: Content is protected !!