Latest Posts

ಇಂದು ಸಚಿವ ಸಂಪುಟ ಪುನರ್ ರಚನೆ; ಮೂವರು ಸಂಸದರು ದೆಹಲಿಗೆ,ದಲಿತರಿಗೆ ಮಣೆ?

ಬೆಂಗಳೂರು: ಇಂದು ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಮೂವರು ಸಂಸದರಿಗೆ ಕೇಂದ್ರದ ನಾಯಕರು ಕರೆ ಮಾಡಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ ಡಾ.ಉಮೇಶ್ ಜಾಧವ್, ರಮೇಶ್ ಜಿಗಜಿಣಗಿ ಹಾಗೂ ಎ‌. ನಾರಾಯಣಸ್ವಾಮಿ ವರಿಗೆ ಕೇಂದ್ರದ ನಾಯಕರು ಕರೆ ಮಾಡಿದ್ದಾರೆ. ಕೇಂದ್ರ ನಾಯಕರ ಕರೆ ಹಿನ್ನೆಲೆಯಲ್ಲಿ ಮೂವರು ದಲಿತ ಸಂಸದರು ದೆಹಲಿಗೆ ದೌಡಾಯಿಸಿದ್ದಾರೆ.

ರಮೇಶ್ ಜಿಗಜಿಣಗಿ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಡಾ.ಉಮೇಶ್ ಜಾಧವ್ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಎ.ನಾರಾಯಣಸ್ವಾಮಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಕೇಂದ್ರದ ಬಿಜೆಪಿ ಪ್ರಮುಖರು ಕರೆ ಮಾಡಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಮೂವರು ಸಂಸದರುಗಳು ದೆಹಲಿ ತಲುಪಿದ್ದಾರೆ.

Share this on:
error: Content is protected !!