ಕೋಲ್ಕತಾ: ನಂದಿಗ್ರಾಮ್ ಚುನಾವಣಾ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೋಲ್ಕತಾ ಹೈಕೋರ್ಟ್ 5 ಲಕ್ಷ ರೂ ದಂಡ ವಿಧಿಸಿದ್ದಾರೆ, ತೀರ್ಪು ನೀಡಿದ ನಂತರ, ನ್ಯಾಯಮೂರ್ತಿ ಕೌಶಿಕ್ ಚಂದಾ ಅವರು ಪ್ರಕರಣದಿಂದ ಹಿಂದೆ ಸರಿದರು.
ಮಮತಾ ನ್ಯಾಯಾಂಗ ವ್ಯವಸ್ಥೆಯನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದಾರೆ ಎಂದು ಹೈಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿ ಕೌಶಿಕ್ ಚಂದಾ ಅವರು ವಿಭಿನ್ನ ಹಿತಾಸಕ್ತಿಗಳನ್ನು ಹೊಂದಿದ್ದರಿಂದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುವಂತೆ ಮಮತಾ ಬ್ಯಾನರ್ಜಿ ಅವರು ಕೇಳಿಕೊಂಡಿದ್ದರು.