ಹಿಮಾಚಲದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ ನಿಧನ ಹೊಂದಿದ್ದಾರೆ. ಅವರ ವಯಸ್ಸು 87 ವರ್ಷ. ಅವರು ಶಿಮ್ಲಾದ ಆಸ್ಪತ್ರೆಯಲ್ಲಿ ನಿಧನರಾದರು.
ಕೋವಿಡ್ ಸೋಂಕಿಗೆ ಒಳಪಟ್ಟು ಎರಡು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದಾರೆ.