Latest Posts

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ತಮಿಳುನಾಡು : ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ರವರು, ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿಯಾದ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಕ ಮಾಡಿದ್ದಾರೆ . ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಸಿಂಗ್ ರವರು ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ಕಳುಹಿಸಿ ಕೊಟ್ಟಿದ್ದಾರೆ.

2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಬುಧವಾರ ಪಕ್ಷದ ರಾಜ್ಯಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು ಪ್ರಸಾರ, ಮತ್ತು ಮೀನುಗಾರಿಕೆ, ಪಶುಸಂಗೋಪನಾ ಸಚಿವಾಲಯವನ್ನು ನೀಡಲಾಗಿದೆ.

ಎಲ್‌. ಮುರುಗನ್‌ ಅವರ ಸ್ಥಾನಕ್ಕೆ ಹಾಲಿ ಶಾಸಕ ನೈನಾರ್‌ ನಾಗೇಂದ್ರನ್ ಅಥವಾ ಅಣ್ಣಾಮಲೈ ಅವರನ್ನು ನೇಮಿಸುವ ಬಗ್ಗೆ ಈ ಹಿಂದೆ ವರದಿಯಾಗಿತ್ತು. ಇದೀಗ ಕುತೂಹಲಕ್ಕೆ ತೆರೆಬಿದ್ದಿದ್ದು ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

Share this on:
error: Content is protected !!