ದೆಹಲಿ: ಕೇಂದ್ರ ಮೋದಿ ಸರಕಾರಕ್ಕೆ ತಲೆನೋವಾಗಿರುವ ರಾಜಿ ಇಲ್ಲದ ಖ್ಯಾತ ಯುವ ಹೋರಾಟಗಾರ, ಸದ್ಯ ಸಿಪಿಎಮ್ ಜೊತೆ ಗುರುತಿಸಿಕೊಂಡಿರುವ ಕನ್ನಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಇಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ಉನ್ನತ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆಗಳು ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಉತ್ಸುಕರಾಗಿದ್ದು, ಕನ್ನಯ್ಯ ಕುಮಾರ್ ಜೊತೆ ಖ್ಯಾತ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗುವುದು ದಿಟವಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸನ್ನಿವೇಶಗಳು ಕಾಂಗ್ರೆಸ್ ಪಾಳಯದಲ್ಲಿ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಹೊಸ ಬದಲಾವಣೆಗೆ ನಾಂದಿಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ಯುವ ಹೋರಾಟಗಾರ ಕನ್ನಯ್ಯ ಕುಮಾರ್ ಶೀಘ್ರ ಕಾಂಗ್ರೆಸ್ ಸೇರ್ಪಡೆ..?!
ಕಾಂಗ್ರೆಸ್ ಉನ್ನತ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ..!!
ರಾಷ್ಟ್ರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ.
