Latest Posts

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಂಸದ, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿ ನಳಿನ್ ಕುಮಾರ್ ಕಟೀಲ್ ಅವರು ಮಾಹಿತಿ ನೀಡಿದ್ದಾರೆ. “ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗದ ಲಕ್ಷಣಗಳು ಕಂಡು ಬಂದಿಲ್ಲ ಆದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.

ನಿಮ್ಮ ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ,” ಎಂದು ಅವರು ಹೇಳಿದ್ದಾರೆ.

Share this on:
error: Content is protected !!