ಕಲಬುರ್ಗಿಯ ಕುರಿ ಸಾಗಾಣಿಕ ಕೇಂದ್ರದಲ್ಲಿ ರಹಸ್ಯವಾಗಿ ಬಚ್ಚಿಟ್ಟಿದ್ದ 13.50 ಕ್ವಿಂಟಲ್ 300 ಗ್ರಾಂ ಗಾಂಜಾವನ್ನು ಬೆಂಗಳೂರು ಪೊಲೀಸರು ನಿನ್ನೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ನಿನ್ನೆ ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಬಂಧಿತರನ್ನು ಗಾಯತ್ರಿನಗರದ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಿದ್ದುನಾಥ್ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಾಥ್ (39) ಹಾಗೂ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಂದ್ರಕಾಂತ್ (34) ಎಂದು ಗುರುತಿಸಲಾಗಿದೆ.