ಮಂಗಳೂರು: ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನದ ಬಿಸ್ಕತ್ಗಳನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ನ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

ದುಬೈನಿಂದ ಹೈದರಾಬಾದ್ ಮಾರ್ಗವಾಗಿ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟ್ ಅಡಿಯಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸಲಾಗಿದ್ದ 33.80 ಲಕ್ಷ ಮೌಲ್ಯದ 6 ಚಿನ್ನದ ಬಿಸ್ಕತ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.