Latest Posts

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರವೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.

ಪಕ್ಷ ಸಂಘಟನೆಗೆ ನನ್ನ ಮೊದಲ ಆದ್ಯತೆ. ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಕಳೆದ ಭಾನುವಾರವೇ ಸಿ.ಟಿ.ರವಿ ಹೇಳಿದ್ದರು. ಈ ನಿಟ್ಟಿನಲ್ಲಿ ನಿನ್ನೆ ಮಧ್ಯಾಹ್ನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Share this on:
error: Content is protected !!