ಹುಬ್ಬಳ್ಳಿ: ರಸ್ತೆ ದುರಸ್ಥಿಗೊಳಿಸದ ಜನ ಪ್ರತಿನಿಧಿಗಳ ವಿರುದ್ಧ ಹುಬ್ಬಳ್ಳಿಯ ಯೂತ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆದಿದೆ.
ನಗರದ ನ್ಯೂ ಕಾಟನ್ ಮಾರ್ಕೆಟ್ ರಸ್ತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಸ್ತೆಯ ತಗ್ಗು ಗುಂಡಿಯ ನೀರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭಾವಚಿತ್ರ ಹಾಗೂ ಕಾಗದ ದೋಣಿ ತೇಲಿ ಬಿಟ್ಟಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಚಿಕ್ಕ ಮಕ್ಕಳು ಕೂಡ ಭಾಗಿಯಾಗಿದ್ದು, ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.ಈ ಹಿಂದೆ ಚರಂಡಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಫೋಟೋ ಇಟ್ಟು ರಂಗೋಳಿ ಹಾಕಿ ಗ್ರಾಮಸ್ಥರು ಪ್ರತಿಭಟಿಸಿದ್ದರು.