Latest Posts

ಕರ್ನಾಟಕ ರಾಜ್ಯದಲ್ಲಿ ಬಿ.ಜೆ.ಪಿ ನೇತೃತ್ವಕ್ಕೆ ನಿಯಂತ್ರಣ ಇಲ್ಲದಂತಾಗಿದೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವ ಕ್ಕೆ ನಿಯಂತ್ರಣ ಇಲ್ಲದಂತಾಗಿದ್ದು , ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ . ಬಾಗಲಕೋಟೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ , ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿದ ಡಿಕೆಶಿ . “ಬಿಜೆಪಿಯವರೇ ಇದು ನಿಮ್ಮ ಸಂಸ್ಕೃತಿಯೇ” ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬಂತಾಗಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ . ಕಾರ್ಪೊರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ ಆದರೆ ಪ್ರಕರಣಗಳು ಬೇರೆ ಯಾರಾದರೂ ಇಂತಹ ಘಟನೆ ನಡೆಸಿದರೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ . ಈ ಘಟನೆ ಪೊಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು ಸಿದ್ದು ಸವದಿ ಮೇಲೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ನಾವು ಕಾದು ನೋಡುವ ಎಂದರು. ಇವರ ಕ್ರಮದ ನಂತರ ನಾವು ಮಾತನಾಡುತ್ತೇವೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗೆ ಬಿಡುತ್ತೇನೆ ಎಂದು ಹೇಳಿದ್ದಾರೆ .

Share this on:
error: Content is protected !!