Latest Posts

ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ: ಸುಳ್ಯದ ಶಾಸಕನಿಗೆ ಕೊನೆಗೂ ದಕ್ಕಿದ ಸಚಿವ ಸ್ಥಾನ!!!

ಬೆಂಗಳೂರು: ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಮುಕ್ತಾಯವಾಗಿದ್ದು, 7 ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ.


ಬಿ.ಎಸ್.ವೈ ಯಡಿಯೂರಪ್ಪ ಅವರು ಘೋಷಣೆ ಮಾಡಿರುವಂತೆ ಉಮೇಶ್ ಕತ್ತಿ, ಎಸ್. ಅಂಗಾರ,  ಸಿ.ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ 7 ಮಂದಿಯ ಹೆಸರನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅದೇರೀತಿ ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಜೊತೆಗೆ ಶಾಸಕರಾದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ  ಏಳು ಸಚಿವರಿಗೆ ಇಂದು ಮಧ್ಯಾಹ್ನ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಮಾಧ್ಯಮ ಗಳಿಗೆ ತಿಳಿಸಿದ್ದಾರೆ.

Share this on:
error: Content is protected !!