ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಗೂಡಿನಬಳಿ ಕಾಂಗ್ರೆಸ್ ಘಟಕದ ವತಿಯಿಂದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲುಕ್ಮಾನ್ ಬಂಟ್ವಾಳ ಹಾಗೂ ಇನ್ನಿತರ ಪದಾಧಿಕಾರಿಗಳಿಗೆ ಸನ್ಮಾನ.

ಬಂಟ್ವಾಳ: ಗೂಡಿನಬಳಿ ಕಾಂಗ್ರೆಸ್ ಘಟಕದ ವತಿಯಿಂದ ನೂತನವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ ಹಾಗೂ ಇತರ ಪದಾಧಿಕಾರಿಗಳಿಗೆ ಗೂಡಿನಬಳಿ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅದರಂತೆ ಸೇರಿದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ನೂತನ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಜೋರಾ ಮತ್ತು ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಂದಾವರ ಹಾಗೂ ಯುವ ಕಾಂಗ್ರೆಸ್ ಮುಖಂಡ ಪರ್ವೇಝ್ ಜಿಕೆ ಇವರನ್ನು ಸನ್ಮಾನಿಸಲಾಯಿತು.


ಸನ್ಮಾನ ಸ್ವೀಕರಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಲುಕ್ಮಾನ್ ಬಂಟ್ವಾಳ ಅವರು ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸುವ ಬಗ್ಗೆ ಕಾರ್ಯಕರ್ತರು ಮುಂದಡಿಯಿಡಬೇಕೆಂದು ಹೇಳಿದ್ದಲ್ಲದೆ ಕೋಮುವಾದಿ ಚಿಂತನೆಗಳಿಗೆ ಸಡ್ಡು ಹೊಡೆಯುವ ಮೂಲಕ ಕಾಂಗ್ರೆಸ್ ಜಾತ್ಯಾತೀತ ಸಿಧ್ಧಾಂತವನ್ನು ಎತ್ತಿ ಹಿಡಿಯಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.


ನಂತರದಲ್ಲಿ ರಮನಾಥ ರೈ ಗೂಡಿನಬಳಿ ಕಛೇರಿಗೆ ಭೇಟಿ ನೀಡಿ ಪ್ರಸ್ತುತ ಕಾರ್ಯಕ್ರಮದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.


ಈ ಸಂದರ್ಭದಲ್ಲಿ ಗೂಡಿನಬಳಿಯ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.

Share this on:
error: Content is protected !!