Latest Posts

ಅಕ್ರಮ ವಲಸಿಗರನ್ನು ಗಡೀಪಾರು ಮಾಡುತ್ತೇವೆ – ಯಡಿಯೂರಪ್ಪ

ಬೆಂಗಳೂರು: ಕರ್ನಾಟಕದಲ್ಲಿರುವ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯದಲ್ಲಿ ಇರುವ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಸೂಚಿಸಲಾಗಿದೆ ಎಂದು ಹೇಳಿದರು.

ನೆರೆಯ ದೇಶಗಳಾದ ಶ್ರೀಲಂಕಾ ಸಹಿತ ಬಾಂಗ್ಲಾದೇಶ, ಪಾಕಿಸ್ತಾನದ ಅಕ್ರಮ ವಲಸಿಗರು ಇರುವುದು ಕೆಲವಾರು ಪ್ರಕರಣಗಳ ಮೂಲಕ ಬೆಳಕಿಗೆ ಬಂದಿತ್ತು. ಅವರು ಅಕ್ರಮವಾಗಿ ಇಲ್ಲಿಂದ ವಿದೇಶಕ್ಕೆ ತೆರಳವುದು, ಸ್ಥಳೀಯರ ಬಳಿ ಕಾರ್ಮಿಕರಾಗಿ ದುಡಿಯುತ್ತಿರುವ ಬಗ್ಗೆ ಹೇಳಿ ಇಲ್ಲಿ ಇರುತ್ತಿರುವುದು ತಿಳಿದುಬಂದಿತ್ತು. ಭಾರತದಲ್ಲಿ ಆಧಾರ್ ಕಾರ್ಡ್ ಕೂಡ ಮಾಡಿಸಿಕೊಳ್ಳುತ್ತಿದ್ದ ಬಗ್ಗೆ ತಿಳಿದುಬಂದಿತ್ತು. ನಂತರ ವಿದೇಶಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿರುವ ಪ್ರಕರಣಗಳನ್ನೂ ಪೊಲೀಸರು ಪತ್ತೆ ಹಚ್ಚಿದ್ದರು.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ವಿಚಾರ ಈ ಹಿಂದೆ ಬಹಿರಂಗವಾಗಿತ್ತು. ಮಾನವ ಕಳ್ಳಸಾಗಣೆ ದಂಧೆಯ ಕಿಂಗ್‌ಪಿನ್‌ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು. ಬೆಂಗಳೂರು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬಾಂಗ್ಲಾದಲ್ಲಿ ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು.

ಬೃಹತ್​ ಮಾನವ ಕಳ್ಳಸಾಗಣೆ ಜಾಲವೊಂದನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಭೇದಿಸಿ ಶ್ರೀಲಂಕಾದ 38 ಪ್ರಜೆಗಳನ್ನು ಬಂಧಿಸಿದ್ದರು. ಸಮುದ್ರ ಮಾರ್ಗವಾಗಿ ತಮಿಳುನಾಡಿಗೆ ಬಂದಿದ್ದ ಶ್ರೀಲಂಕಾದ ಪ್ರಜೆಗಳು ನಂತರ ತಮಿಳುನಾಡಿನಿಂದ ಮಂಗಳೂರಿಗೆ, ಅಲ್ಲಿಂದ ಕೆನಡಾಕ್ಕೆ ತೆರಳಲು ಪ್ರಯತ್ನಿಸುತ್ತಿದ್ದ ವೇಳೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೇ ಸಿಲುಕಿ ಪೋಲಿಸರ ಅತಿಥಿಯಾಗಿದ್ದರು.

Share this on:
error: Content is protected !!