ಬೆಂಗಳೂರು: ಜುಲೈ 19 ಮತ್ತು ಜುಲೈ 22 ರಂದು ಎರಡು ದಿನಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಜುಲೈ 19, 22ರಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ ,ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.

SSLC ಗೆ 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು,73,066 ಪರೀಕ್ಷಾ ಕೇಂದ್ರಗಳಿರುತ್ತವೆ.ಕಳೆದ ಬಾರಿ 48 ಪರೀಕ್ಷಾ ಕೇಂದ್ರಗಳಿದ್ದವು.ಕೋವಿಡ್ ಹಿನ್ನೆಲೆ ಪರೀಕ್ಷಾ ಕೇಂದ್ರಗಳು ಹೆಚ್ಚಳ ಮಾಡಲಾಗಿದೆ.ಸರ್ಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ.

ಒಂದು ಡೆಸ್ಕ್ನಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶವಿದೆ.ಕೊಠಡಿಯಲ್ಲಿ 12 ಮಂದಿ ಮಾತ್ರ ಅವಕಾಶ,ಮಕ್ಕಳಿಗೆ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತದೆ.ಪರೀಕ್ಷೆ ಹಾಗೂ ಪ್ರಶ್ನೆ ಪತ್ರಿಕೆ ಸರಳವಾಗಿದ್ದು ಜೂನ್ 30ಕ್ಕೆ ಮಕ್ಕಳಿಗೆ ಹಾಲ್ ಟಿಕೆಟ್ ನೀಡಲಾಗುತ್ತದೆ.ಕೊರೊನಾ ಲಕ್ಷಣಗಳಿರುವ ಮಕ್ಕಳಿಗೆ ಕೊರೊನಾ ಕೇರ್ ಸೆಂಟರ್ನಲ್ಲೇ ಪರೀಕ್ಷೆ ನಡೆಸಲಾಗುತ್ತಿದ್ದು ಕೊಠಡಿಯ ಮೇಲ್ವಿಚಾರಕರು ಲಸಿಕೆ ಪಡೆದಿರಲೇ ಬೇಕು.