Latest Posts

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್

ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ

ಸೋಲಿಲ್ಲದ ಸರದಾರನಿಗೆ ಒಲಿದು ಬಂದ ಮಹತ್ವದ ಜವಾಬ್ದಾರಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಶಾಸಕ ಯು.ಟಿ.ಖಾದರ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಈ ನೇಮಕದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಊಳ್ಳಾಲದ ಮಾಜಿ ಶಾಸಕ ದಿವಂಗತ ಯು.ಟಿ ಫರೀದ್ ಅವರ ಮಗನಾಗಿ ಜನಿಸಿದ ಶ್ರೀಯುತ ಯು.ಟಿ.ಖಾದರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ 2007 ರಿಂದ ನಿರಂತರವಾಗಿ ಇದುವರೆಗೂ ನಾಲ್ಕು ಬಾರಿ ಚುನಾಯಿತರಾಗಿರುತ್ತಾರೆ.
ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಅರೋಗ್ಯ ಸಚಿವರಾಗಿಯೂ, ಆ ನಂತರ ಆಹಾರ, ನಾಗರಿಕ ಸರಬರಾಜು ಸಚಿವರಾಗಿಯೂ ಮತ್ತು ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿಯೂ ಸೇವೆ ಸಲ್ಲಿಸಿರುತ್ತಾರೆ.
ಶ್ರೀಯುತರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಜಯಿಸಿದ ಏಕೈಕ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದಾರೆ.

Share this on:
error: Content is protected !!